ಬೇಲೂರು :ತಾಲ್ಲೂಕಿನ ಬಿಕ್ಕೊಡು ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಎಂದು ಬಿಕ್ಕೋಡು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ, ಬಿಕ್ಕೋಡು ಗ್ರಾಮದ ಕುವೆಂಪುನಗರ ವಾರ್ಡ್ ಒಂದರಲ್ಲಿ ಸುಮಾರು 200ಕ್ಕೂ ಹೆಚ್ಚು ಶ್ವಾನಗಳಿದ್ದು ಜನ ಓಡಾಡುವಾಗ ಮತ್ತು ವಾಹನ ಚಲಾಯಿಸುವ ವೇಳೆ ಹಿಂಬಾಲಿಸಿಕೊಂಡು ಬೊಗಳುತ್ತವೆ.ಶಾಲಾ–ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ವಯೋವೃದ್ಧರು ವಾಯು ವಿಹಾರಕ್ಕೆ ತೆರಳುವ ವೇಳೆ ನಾಯಿಗಳು ದಾಳಿ ನಡೆಸುತ್ತವೆ. ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಚಲಿಸುವ ವಾಹನಗಳಿಗೆ ಅಡ್ಡ ಬಂದು ವಾಹನ ಸವಾರರು ಬೀಳುವುದು ಸಾಮಾನ್ಯವಾಗಿದೆ