ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ಅನುದಾನಗಳನ್ನು ಮೀಸಲಿಟ್ಟಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗನಗೌಡ ಹೇಳಿದರು.ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಆಯಾ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯ ಮತ್ತು ಸಂವಹನದ ಮೂಲಕ ಮಕ್ಕಳ ಹಕ್ಕುಗಳು ಮತ್ತು ಸ್ವಾತಂತ್ರ್ಯ ಕಾಪಾಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.