ರೈಲ್ವೇ ಟ್ರ್ಯಾಕ್ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೆಪ್ಟೆಂಬರ್ 6ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ದೀಪಾಂಜಲಿ ನಗರದ ಬಳಿಯ ರೈಲ್ವೇ ಟ್ರ್ಯಾಕ್ ಮೇಲೆ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಸುಮಾರು 50 ವರ್ಷ ಆಸುಪಾಸಿನ ಪುರುಷನ ಮೃತದೇಹ ಪತ್ತೆಯಾಗಿದೆ.ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.