ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಡಿ. ಕೆ. ಶಿವಕುಮಾರ್ ಅವರು ಮಾತನಾಡಿ, "ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು. ಇದಕ್ಕೆ ನಾನು ಬದ್ಧ" ಎಂದರು.