ನಗರದ ಶ್ರೀವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಹಾಗು ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭವನ್ನು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಉದ್ಘಾಟನೆ ಮಾಡಿದರು. ನಂತರ ಮಾತನಾಡಿ ಶಿಕ್ಷಕ ವೃತ್ತಿಯನ್ನುವುದು ಪವಿತ್ರವಾದ ವೃತ್ತಿ, ಮಕ್ಕಳಿಗೆ ಉತ್ತಮವಾದ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಕರ ಪಾತ್ರ ಪ್ರಮುಖವಾಗಿರುತ್ತದೆ ಎಂದರು.ಈ ವೇಳೆ ನಗರಸಭೆ ಅಧ್ಯಕ್ಷೆ ಶಿಲ್ಪಾ, ಗ್ಯಾರೆಂಟಿ ಯೋಜನೆಗಳ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದುಗೆ ತಿಪ್ಪೇಸ್ವಾಮಿ ಸೇರಿದಂತೆ ಮುಂತಾದವರು ಇದ್ದರು.