ಗಣೇಶ ಚತುರ್ಥಿ ಹಾಗೂ ಈದ ಮಿಲಾದ ಹಬ್ಬದ ಪ್ರಯುಕ್ತ ಬಾಗಲಕೋಟೆ ಜಿಲ್ಲಾ ಪೊಲೀಸ್ ಕೈಗೊಂಡ ಮುಂಜಾಗೃತ ಕ್ರಮಗಳು ಹಾಗೂ ಬಂದೋಬಸ್ತ್ ವ್ಯವಸ್ಥೆಯನ್ನ ಬೆಳಗಾವಿಯ ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕ ಚೇತನ್ ಸಿಂಗ್ ರಾಥೋರ್ ಅವರು ಪರಿಶೀಒನೆ ನಡೆಸಿದರು.ಬಾಗಲಕೋಟೆ ನಗರದ ಜಿಲ್ಲಾ ಪೊಲೀಸ್ ಕಾರ್ಯಾಲಯಕ್ಕೆ ಭೇಟಿ ನೀಡಿ,ಅಧಿಕಾರಿಗಳ ಜೊತೆ ಸಭೆ ನಡೆಸಿದರು.ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಬಗ್ಗೆ ಪರಿಶೀಲಿಸಿ, ಮುಂಜಾಗೃತಾ ಕ್ರಮಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಸಿದ್ದಾರ್ಥ್ ಗೋಯಲ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹಾಂತೇಶ್ವರ ಜಿದ್ದಿ ಹಾಗೂ ಬಾಗಲಕೋಟೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು ಹಾಗೂ ವೃತ್ತ ನಿರೀಕ್ಷಕರು ಉಪಸ್ಥಿತರಿದ್ದರು.