ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಅನ್ಯಕೋಮಿನವರು ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾಗಿ ಆರೋಪಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದರಿಂದ ಹಲವರಿಗೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಸ್ಥಳದಲ್ಲಿದ್ದಂತ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಗಣೇಶ ಮೆರವಣಿಗೆ ಮುಂದುವರೆಸಲು ಅವಕಾಶ ಮಾಡಿಕೊಟ್ಟರು. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ. ಮಸೀದಿಯ ಮುಂಭಾಗದಲ್ಲಿ ಡಿಜೆ ಬಳಸಿ ನೃತ್ಯ ಮಾಡಿದ್ದಾರೆ.