ನಾಡಹಬ್ಬ ದಸರಾ ಹಿನ್ನೆಲೆ ಆಯುಧ ಪೂಜೆಯನ್ನ ತೀರ್ಥಹಳ್ಳಿ ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಬುಧವಾರ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಇಟ್ಟು ಪೂಜೆ ಸಲ್ಲಿಸಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದು ರಿವಾಲ್ವರ್ ಗಳಿಗೆ ವಿಶೇಷವಾಗಿ ಪೂಜೆ ಮಾಡಲಾಯಿತು. ಅದರಲ್ಲೂ ವಿಶೇಷವಾಗಿ ಪೊಲೀಸರೆಲ್ಲರೂ ಸಹ ಧಾರ್ಮಿಕ ಉಡುಗೆ ತೊಟ್ಟು ಹಬ್ಬವನ್ನು ಸಂಭ್ರಮಿಸಿದರು.