ಮದ್ದೂರು ತಾಲ್ಲೂಕು ಅಣ್ಣೂರು ವಿವಿದೊದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆವರಣದಲ್ಲಿ ವಾರ್ಷಿಕ ಮಹಾಸಭೆ ಜರುಗಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಿ.ಪ್ರಸನ್ನ ಅವರು ಶುಕ್ರವಾರ ಸಂಜೆ 4 ಗಂಟೆಯಲ್ಲಿ ಮಾತನಾಡಿ, ಅಣ್ಣೂರು ವಿವಿದೊದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ 2024-25 ನೇ ಸಾಲಿನಲ್ಲಿ 16,28,158 ಲಕ್ಷ ಲಾಭ ಗಳಿಸಿದೆ ಎಂದು ತಿಳಿಸಿದರು. ಸಂಘವು ಲಾಭದತ್ತ ಸಾಗುತ್ತಿದ್ದು, ಇದಕ್ಕೆ ಸಂಘದ ಸರ್ವ ಸದಸ್ಯರೇ ಕಾರಣಾರಾಗಿದ್ದಾರೆ. ಮುಂದೆಯೂ ಕೂಡ ಇದೇ ರೀತಿ ಸಹಕಾರ ನೀಡಿದರೆ ಸಂಘವು ತಾಲ್ಲೂಕಿನಲ್ಲಿ ಉತ್ತಮ ಹೆಸರು ಗಳಿಸಲು ಸಹಕಾರವಾಗುತ್ತದೆ ಎಂದು ತಿಳಿಸಿದರು. ಸೊಸೈಟಿಯಿಂದ ಸಿಗುವಂತಹ ಸೌಲಭ್ಯಗಳನ್ನು ರೈತರಿಗೆ ಸಮರ್ಪಕವಾಗಿ ನೀಡಲಾಗುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿ