ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಸಕ ಪ್ರಕಾಶ ಕೋಳಿವಾಡ ಅವರು ರಾಣೇಬೆನ್ನೂರಿನ ಹುಲಿಹಳ್ಳಿ ಕ್ರಾಸ್ ಬಳಿ ಇರುವ ದರ್ಗಾದಲ್ಲಿ ಆಯೋಜಸಿದ್ದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಮಸ್ತ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು. ಬಳಿಕ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.