ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ ಮತ್ತೆ 20 ಗೇಟುಗಳ ಮುಖಾಂತರ 80 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಆಲಮಟ್ಟಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಬಸವಸಾಗರ ಜಲಾಶಯಕ್ಕೆ 81 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಾಗಿದೆ. ನಾರಾಯಣಪುರ ಜಲಾಶಯದಲ್ಲಿ ಸದ್ಯ 32.609 ಟಿಎಂಸಿ ನೀರು ಸಂಗ್ರಹವಿದೆ. ಹೆಚ್ಚುವರಿ ನೀರನ್ನು ಕೃಷ್ಣಾನದಿಗೆ ಹರಿಬಿಡಲಾಗಿದೆ ಎಂದು ಆಣೆಕಟ್ಟಿನ ಅಧಿಕಾರಿಗಳು ಸೆ.6 ರ ಶನಿವಾರ ಬೆಳಗ್ಗೆ 7 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.