ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಎರಡು ಸ್ಲಾಟ್‌ಗಳಲ್ಲಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದ್ದು. ಸೆಪ್ಟಂಬರ್ ೧ ರಿಂದ ಜಾರಿಗೆ ಬರಲಿದೆ. ವಾಹನಗಳು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಮತ್ತು ಮಧ್ಯಾಹ್ನ ೧ ರಿಂದ ಸಂಜೆ ೬ ಗಂಟೆಯವರೆಗೆ- ಹೀಗೆ ಎರಡು ಸ್ಲಾಟ್‌ಗಳಲ್ಲಿ ದಿನವಹಿ ಒಟ್ಟು ೬೦೦ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾಗಳ ಸಂಖ್ಯೆಯನ್ನು ೧೦೦ಕ್ಕೆ ಸ್ಥಳೀಯ ಹಳದಿ ಬಣ್ಣದ ಬೋರ್ಡ್ ಟ್ಯಾಕ್ಸಿಗಳ ಸಂಖ್ಯೆಯನ್ನು ೧೦೦ಕ್ಕೆ ಸೀಮಿತಗೊಳಿಸಲಾಗಿದೆ.