Download Now Banner

This browser does not support the video element.

ದಾಂಡೇಲಿ: ಪ್ರವಾಸೋದ್ಯಮದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಹಾಗೂ ಹದಗೆಟ್ಟ ರಸ್ತೆ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐನಿಂದ ಮನವಿ

Dandeli, Uttara Kannada | Sep 9, 2025
ದಾಂಡೇಲಿ: ಪ್ರವಾಸೋದ್ಯಮದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಹಾಗೂ ಹದಗೆಟ್ಟ ರಸ್ತೆ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐನಿಂದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರರ ಮೂಲಕ ಪ್ತವಾಸೋದ್ಯಮ ಸಚಿವರಿಗೆ ಇಂದು ಮಂಗಳವಾರ ಸಂಜೆ 4:30 ಗಂಟೆ ಸುಮಾರಿಗೆ ಲಿಖಿತ ಮನವಿಯನ್ನು ಸಲ್ಲಿಸಲಾಯ್ತು. ಸಚಿವರಿಗೆ ಬರೆದ‌ ಮನವಿಯಲ್ಲಿ ದಾಂಡೇಲಿ ಸೇರಿದಂತೆ ಸುತ್ತಮುತ್ತಲ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡು ದುಡಿಯುತ್ತಿರುವ ಕಾರ್ಮಿಕರು ಸಾಮಾಜಿಕ ಭದ್ರತೆಯಿಲ್ಲದೇ ದುಡಿಯುತ್ತಿದ್ದಾರೆ. ಈ ಕಾರ್ಮಿಕರಿಗೆ ಜೀವನ ಭದ್ರತೆಯಿಲ್ಲದಿರುವುದರಿಂದ ಸಾಮಾಜಿಕ ಭದ್ರತೆಯನ್ನು ಒದಗಿಸುವಂತೆ ಆಗ್ರಹಿಸಲಾಗಿದೆ.
Read More News
T & CPrivacy PolicyContact Us