ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ. ಆ ದಿಸೆಯಲ್ಲಿ ಈ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕಿದೆ ಎಂದರು. ಯಾವುದೇ ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರವಹಿಸಬ