ಒಳ ಮೀಸಲಾತಿ ವರ್ಗೀಕರಣದ ಕುರಿತು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಣಯ ವಿರೋಧಿಸಿ ಪಟ್ಟಣದಲ್ಲಿ ಲಂಬಾಣಿ ಸಮುದಾಯದವರು ಪ್ರತಿಭಟನೆ ನಡೆಸಿದರು. ಸುರಿಯುತ್ತಿರುವ ಮಳೆಯಲ್ಲಿಯೇ ಫಕೀರೇಶ್ವರ ಮಠದಿಂದ ಬೃಹತ್ ಪ್ರತಿಭಟನೆ ನಡೆಸಿ, ನೆಹರು ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ, ಶಾಸಕ ಡಾ. ಚಂದ್ರು ಲಮಾಣಿ, ಒಳಮೀಸಲಾತಿ ಬಂಜಾರ ಸಮಾಜಕ್ಕೆ ಮರಣ ಶಾಸನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಡೆದು ಆಳುವ ನೀತಿ ಅನುಸರಿಸಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಕಿಡಿಕಾರಿದರು.