ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ ನೂತನ ಅಧ್ಯಕ್ಷರಾದ ಅಜ್ಮೀರ ನಂದಾಪುರ ಅವರು ಇಂದು ಕೊಪ್ಪಳ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿ ಮಾತನಾಡಿದರು. ಸೆಪ್ಟೆಂಬರ್ 12 ರಂದು ಮಧ್ಯಾಹ್ನ 2-30 ಗಂಟೆಗೆ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್ ಸೇರಿದಂತೆ ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.