ಮುಂಬರುವ ಗಣಪತಿ ಮೆರವಣಿಗೆ ಮತ್ತು ಈದ್‌ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಶಾಂತಿ ಕಾಪಾಡಲು ಮತ್ತು ಎಲ್ಲಾ ಧರ್ಮದವರು ಒಟ್ಟಾಗಿ ಸಾಮರಸ್ಯದಿಂದ ಹಬ್ಬ ಆಚರಿಸುವ ದೃಷ್ಠಿಯಿಂದ ನಮ್ಮ ನಡೆ-ಶಾಂತಿಯ ಕಡೆ ಸಮಿತಿಯು ಸೆ.4ರಂದು ಮಧ್ಯಾಹ್ನ 4 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಸೌಹಾರ್ಧವೇ ಹಬ್ಬ ಎಂಬ ಶಾಂತಿಸಭೆಯನ್ನು ಹಮ್ಮಿಕೊಂಡಿದೆ ಎಂದು ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು. ಮಂಗಳವಾರ ಸಂಜೆ 6 ಗಂಟೆಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಳೆದ 4 ವರ್ಷಗಳಿಂದ ನಮ್ಮ ಸಮಿತಿಯು ಶಿವಮೊಗ್ಗದಲ್ಲಿ ಶಾಂತಿ ನೆಲೆಸುವ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು