ಯಲ್ಲಾಪುರ ತಾಲೂಕಿನ ಇಡಗುಂದಿಯಲ್ಲಿ ಶನಿವಾರ ಸಂಜೆ 4.30ರ ವೇಳೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಸಭೆಯಲ್ಲಿ ಭಾಗಿಯಾಗಿ ಅಗತ್ಯ ಸಲಹೆಗಳನ್ನು ನೀಡಿದರು. ಈ ವೇಳೆ ಇಡಗುಂದಿ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಭಟ್, ಸೇರಿದಂತೆ ನಿರ್ದೇಶಕರು, ಸಹಕಾರಿ ಧುರೀಣರು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.