ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಯ ಚಳ್ಳಕೆರೆ ನಿವಾಸ ಸೇರಿ 17 ಕಡೆ ಶುಕ್ರವಾರ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಳ್ಳಕೆರೆ ನಿವಾಸ, ಬೆಂಗಳೂರು, ಗೋವಾ ಸೇರಿ 17 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಪ್ಪಿ ರತ್ನ ಗೋಲ್ಡ್ ಕಂಪನಿ, ಪಪ್ಪಿ ಟೆಕ್ನಾಲಜೀಸ್, ಟೂರ್ಸ್ ಅಂಡ್ ಟ್ರಾವೆಲ್ಸೆ ಸೇರಿ ಹಲವು ಕಂಪನಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ಮುಂದುವರೆಸಿದ್ದಾರೆ.