ಚನ್ನಪಟ್ಟಣ ತಾಲ್ಲೂಕಿನ ಮಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಅವರು ಬುಧವಾರ ಭೇಟಿ ನೀಡಿ ಸದಸ್ಯರ ಆಹ್ವಾಲು ಸ್ವೀಕರಿಸಿದರು. ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಿದ್ದು ಈ ಹಿನ್ನಲೆ ಬೋರವೆಲ್ ಕೊರೆಸುವ ಬಗ್ಗೆ ಭರವಸೆ ನೀಡಿದರು. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಈ ವೇಳೆ ಸೂಚಿಸಿದರು.