ಭಾರತೀಯ ಜನತಾ ಪಕ್ಷ ಇತರೆ ರಾಜಕೀಯ ಪಕ್ಷಗಳಂತೆ ಚುನವಣೆ,ರಾಜಕೀಯಕ್ಕೆ ಸೀಮಿವಾಗುವುದಿಲ್ಲ, ಪಕ್ಷದ ಕಾರ್ಯಕರ್ತರು ಗಣ್ಯರ ಹೆಸರಿನಲ್ಲಿ ಸಮಾಜದಲ್ಲಿ ಸಾಮಾಜಿಕ ಕಾರ್ಯಗಳನ್ನೂ ಸಾಕಾರಗೊಳಿಸಲು ಸಂಕಲ್ಪ ಮಾಡಿ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿ ಜಿಲ್ಲಾ ಉಸ್ತುವಾರಿ ಕೇಶವ ಪ್ರಸಾದ್ ಕರೆ ನೀಡಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸೇವಾ ಪಾಕ್ಷಿಕ ಕಾರ್ಯಗಾರದಲ್ಲಿ ಮಾತನಾಡಿ, ದೇಶಕ್ಕಾಗಿ ಶ್ರಮಿಸಿದ ಗಣ್ಯರ ಹೆಸರಿನಲ್ಲಿ ಅಭಿಯಾನ ನಡೆಯುತ್ತಿದ್ದು, ಇದರ ಯಶಸ್ಸಿಗೆ ಸಹಕರಿಸಬೇಕು ಎಂದು ತಿಳಿಸಿದರು.