ಕ್ರೀಡಾಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಎಂದಿಗೂ ವಿಶೇಷ ಗೌರವವಿದ್ದು, ಇವರು ನಮ್ಮೆಲ್ಲರಿಗೆ ಸ್ಪೂರ್ತಿದಾಯಕರಾಗಿರುತ್ತಾರೆ ಎಂದು ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ವಾಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಣ ಪಾತ್ರವಲ್ಲದೆ ಕ್ರೀಡೆ ಮತ್ತು ಇತರೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಮುಖ್ಯವಾಗಿದ್ದು,ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.