ಶ್ರೀ ಸಿದ್ದಿ ವಿನಾಯಕ ಸಮಿತಿ ಜೆಸ್ಕಾಂ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಆಗಸ್ಟ್ 27,ಬುಧವಾರ ಮಧ್ಯಾಹ್ನ 12 ಗಂಟೆಗೆ ಶ್ರೀ ಸಿದ್ದಿ ವಿನಾಯಕ ಸಮಿತಿ ಜೆಸ್ಕಾಂ ವತಿಯಿಂದ 61ನೇ ವರ್ಷದ ಗಣೇಶ ಮೂರ್ತಿಯನ್ನು ಜೆಸ್ಕಾಂ ಕಚೇರಿ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಟಿಸಿಎಲ್ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ್ ರವರು, “ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಹಬ್ಬದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ” ಎಂದು ಹೇಳಿದರು.