ತಾಲೂಕಿನ ಪು.ಬಡ್ನಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ, ಪ್ರಾಥಮಿಕ ವಿಭಾಗದ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ಶಾಸಕ ಡಾ. ಚಂದ್ರು ಲಮಾಣಿ ಅವರು ಭೂಮಿಪೂಜೆ ನೆರವೇರಿಸಿದರು. ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ ಪಂ.ರಾಜ್. ಇಂಜಿನಿಯರಿಂಗ್ ವಿಭಾಗ, ಗದಗ ಯೋಜನೆ ಅಡಿ 30.45 ಲಕ್ಷ ವೆಚ್ಚದಲ್ಲಿ ಶಾಲೆಯ ಆವರಣದಲ್ಲಿ ಮಕ್ಕಳ ಅನುಕೂಲಕ್ಕಾಗಿ 2 ಶಾಲಾ ಕೊಠಡಿಗಳ ನಿರ್ಮಿಸಲಾಗುವುದು ಎಂದರು.