ಮಂಡ್ಯ : ತೆಂಗಿನ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಭಾದಿತ ಪ್ರದೇಶಗಳ ವೈಜ್ಞಾನಿಕ ಸಮೀಕ್ಷೆ ಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ತೆಂಗಿನ ಬೆಳೆಯು ಪ್ರಮುಖವಾ ಗಿದ್ದು ಜಿಲ್ಲೆಯಲ್ಲಿ ಒಟ್ಟು 74731 ಹೆಕ್ಟೇರ್ ವಿಸ್ತೀರ್ಣದಲ್ಲಿ ತೆಂಗು ಬೆಳೆಯನ್ನು ಬೆಳೆಯಲಾಗುತ್ತಿದೆ ಎಂದರು. ಜಿಲ್ಲೆಯ ಮದ್ದೂರು, ಕೆ.ಆರ್. ಪೇಟೆ ಹಾಗೂ ನಾಗಮಂಗಲ ತಾಲ್ಲೂಕುಗಳಲ್ಲಿ ತೆಂಗಿನ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತದೆ ಎಂದು ಅವರು ವಿವರಿಸಿದರು.