ತುಮಕೂರಿನ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ರಥದ ಶೆಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನ ಶಾಸಕ ಜ್ಯೋತಿ ಗಣೇಶ್ ನೆರವೇರಿಸಿದರು. ಬುಧವಾರ ಬೆಳಿಗ್ಗೆ 11 ರ ಸಮಯದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು. ಬಳಿಕ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ದೇವಾಲಯ ಅಭಿವೃದ್ಧಿ ಕೆಲಸ ನಿರ್ವಹಿಸುವಾಗ ನಾವುಗಳು ರಾಜಕೀಯ ಮಾಡುವುದಿಲ್ಲ,ದಾಸೋಹ ನಡೆಸುತ್ತಿರುವ ಜಾಗದ ವಿವಾದವಿದೆ. ಹೀಗಾಗಿ ಜಿಲ್ಲಾಧಿಕಾರಿ ಅವರು ಭೂಮಿಯನ್ನ ಸ್ವಾಧೀನಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸಬೇಕು ಎಂಬುದಾಗಿ ತಿಳಿಸಿರುವುದಾಗಿ ಹೇಳಿದರು. ವೇದಿಕೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ,ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ನಾಗಣ್ಣ ಇದ್ದರು.