ಬೈಕ್ ಅಪಘಾತದಲ್ಲಿ ಗಾಯಗೊಂಡ ಪೊಲೀಸ್ ಕಾನ್ಸ್‌ಟೇಬಲ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗ್ಗೆ 11 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಕಮಲಾಪುರದ ನಿವಾಸಿಯಾಗಿದ್ದ ದಿನೇಶ್ ವಾಡ್ಕರ್ ಎಂಬುವವರೇ ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ. ಧಾರವಾಡದ ಜೆ.ಎಸ್.ಎಸ್ ಕಾಲೇಜು ಬಳಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್‌ಟೇಬಲ್ ದಿನೇಶ್ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.