ಜಿಲ್ಲೆಯಲ್ಲಿ ಸೆಪ್ಟೆಂಬರ್ 06 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗಿಗಳಾಗಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿರುದ್ಯೋಗ ಯುವಕ ಯುವತಿಯರ ನೊಂದಣಿ ಪ್ರಕ್ರಿಯೆ ಪ್ರಾರಂಭ ಮಾಡಬೇಕು. ನೊಂದಣಿ ಪ್ರಕ್ರಿಯೆಯ ಡ್ರೈವ್ ಮಾಡಿಸಬೇಕು. ನೋಂದಣಿ ಪ್ರಕ್ರಿಯೆಗೆ ಲಿಂಕ್ ನೀಡಲಾಗುವುದು ಎಂದರು.