ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಮಿಣಜಗಿ ಗ್ರಾಮದ ಬಳಿ ಬೈಕ್ ಸವಾರನೊರ್ವ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತಾಳಿಕೋಟಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಂಬಂಧಿಕರ ಮನೆಗೆ ಹೋಗಿ ವಾಪಸ್ ತೆರಳುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತದೆ..