ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ ಅಂಗವಾಗಿ ಮಂಗಳವಾರ ಬೆಳಿಗ್ಗೆ ಸಂಗ್ರಹಣೆ ಕಲ್ಲು ಎತ್ತುವ ಸ್ಪರ್ಧೆ ನಡೆಸಲಾಯಿತು. ಗ್ರಾಮದ ಶ್ರೀ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದ ಸ್ಪರ್ಧೆಯಲ್ಲಿ ಮಾನ್ವಿ ತಾಲೂಕಿಗೆ ಸೇರಿದಂತೆ ಬೇರೆ ಬೇರೆ ತಾಲೂಕುಗಳಿಂದ ಅನೇಕ ಸ್ಪರ್ದಾಳುಗಳು ಭಾಗವಹಿಸಿದ್ದರು. ಒಂದು ಕ್ವಿಂಟಲ್ ಗಾತ್ರದ ವರೆಗಿನ ಸಂಗ್ರಹಣೆ ಕಲ್ಲುಗಳನ್ನು ಎತ್ತುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದರು. ಇದೇ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ದೇವಾಲಯದಿಂದ ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮೀಣ ಕ್ರೀಡೆಗಳನ್ನು ಹಾಗೂ ಸಂಪ್ರದಾಯ ಕ್ರೀಡಾ ಭಾವನೆಯನ್ನು ಉಳಿಸುವ ನಿಟ್ಟಿನಲ್ಲಿ ಸ್ಪರ್ಧೆ ಏರ್ಪಡಿಸಲಾಗಿತ್ತು ಎಂದು ಆಯೋಜಕರು ತಿಳಿಸಿದ್ದಾರೆ.