ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಒನ್ ವೇನಲ್ಲಿ ಹೋದ ಬೈಕ್ ಸವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೆಪ್ಟೆಂಬರ್ 7ರಂದು ಸಂಜೆ 5:30ರ ಸುಮಾರಿಗೆ ಸಿ.ವಿ.ರಾಮನ್ ನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೈ ಜುಂ ಎನ್ನಿಸುವ ಅಪಘಾತದ ದೃಶ್ಯ ಕಾರೊಂದರ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ತುಂತುರು ಮಳೆಯಿಂದಾಗಿ ಟ್ರಾಫಿಕ್ ಜಾಮ್‌ನಿಂದ ತಪ್ಪಿಸಿಕೊಳ್ಳಲು ಬೈಕ್ ಸವಾರನೊಬ್ಬ ಒನ್ ವೇನಲ್ಲಿ ತೆರಳಿದ್ದಾನೆ. ಅದೇ ಸಂದರ್ಭದಲ್ಲಿ ಎದುರುಗಡೆಯಿಂದ ಬಂದ ಆಟೋ ರಿಕ್ಷಾ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಹಾರಿ ನೆಲಕ್ಕೆ ಬಿದ್ದಿದ್ದಾನೆ. ಸದ್ಯ ಗಾಯಾಳು ಸವಾರ ಆಸ್ಪತ್ರೆಗೆ ದಾಖಲಾಗಿದ್ದಾನೆ.