ಚಾಮರಾಜನಗರ: ಹಿಂದೂ ಕಾರ್ಯಕರ್ತರನ್ನು ಚಾಮರಾಜನಗರ ಜಿಲ್ಲಾ ಪೊಲೀಸರು ಗುರಿಯಾಗಿಸುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರು ಮತ್ತು ಹಿಂದೂ ಪರ ಸಂಘಟನೆಗಳ ಆರೋಪಗಳಿಗೆ ಚಾಮರಾಜನಗರಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಕಾಡಾ ಅಧ್ಯಕ್ಷ ನಿಜಗುಣರಾಜು ಹಾಗೂ ಹಿಂದೂ ಪರ ಕಾರ್ಯಕರ್ತರು, ಹಿಂದೂಗಳ ಧಾರ್ಮಿಕ ಭಾವನೆ ಹಾಗೂ ಆಚರಣೆಗಳನ್ನು ಹತ್ತಿಕ್ಕುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಪಿ ಕವಿತಾ ಮಾತನಾಡಿಯಾವುದೇ ಸಮುದಾಯದ ವ್ಯಕ್ತಿಗಳನ್ನು ಹತ್ತಿಕ್ಕುವ ಅಥವಾ ಬಗ್ಗುಬಡಿಯುವ ಕೆಲಸ ಮಾಡುತ್ತಿಲ್ಲ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು