ಬಂಡಳ್ಳಿ–ಮಣಗಳ್ಳಿ ಗ್ರಾಮಗಳ ನಡುವೆ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು. ಈ ಸಂದರ್ಭ ಮಾತನಾಡಿದ ಅವರು ಈ ರಸ್ತೆ ಮಾರ್ಗದಲ್ಲಿ ಪ್ರತಿದಿನವೂ ಬಸ್ಸು, ಲಾರಿ, ಧ್ವಿಚಕ್ರ, ತ್ರಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತವೆ. ಆದರೆ ಈ ಮಾರ್ಗದ ರಸ್ತೆ ಹದಗೆಟ್ಟಿದ್ದು, ಕೆಲ ಸ್ಥಳಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಮಳೆ ಬಂದಾಗ ಈ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳು ಹೆಚ್ಚಾಗಿತ್ತುಈ ಹಿನ್ನೆಲೆಯಲ್ಲಿಯೇ, ಲೋಕೋಪಯೋಗಿ ಇಲಾಖೆಯಿಂದ ಸುಮಾರು 24.80 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದರು