ದಾಂಡೇಲಿ : ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ಆಶ್ರಯದಡಿ ಹಳೆ ನಗರಸಭೆಯ ಮೈದಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ 9ನೇ ದಿನವಾದ ಮಂಗಳವಾರ ಸಂಜೆ 6.30 ಗಂಟೆಯಿಂದ ರಾತ್ರಿ 8.30 ಗಂಟೆಯವರೆಗೆ ನಡೆದ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ನೀಡಿ ಜನ ಮೆಚ್ಚುಗೆಯನ್ನು ಪಡೆದ ಹಳಿಯಾಳದ ಹೊಂಗಿರಣ ಕಲಾವಿದರ ಬೊಂಬೆಯಾಟ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಕಲಾವಿದ ಸಿದ್ದಪ್ಪ ಬಿರಾದರರವರ ನೇತೃತ್ವದಲ್ಲಿ ನಡೆದ ಬೊಂಬೆಯಾಟ ಅಪಾರ ಜನಾಕರ್ಷಣೆಗೆ ಪಾತ್ರವಾಯಿತು. ಕಾರ್ಯಕ್ರಮದ ಕೊನೆಯಲ್ಲಿ ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ವತಿಯಿಂದ ಸಮಿತಿಯ ಗೌರವಾಧ್ಯಕ್ಷರಾದ ಸುನೀಲ ಹೆಗಡೆಯವರು ಸನ್ಮಾನಿಸಿದರು.