ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಶಿವಮೊಗ್ಗ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯನ್ನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಕ್ಕಳಿಗೆ ವಿವಿಧ ಮಹಾನ್ ನಾಯಕರ ಜಯಂತಿಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಮಹತ್ವದ ಕಾರ್ಯವಾಗಿದೆ ಎಂದರು.