ಉತ್ತರ ಕನ್ನಡ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ನಾಗರಿಕ ಸಮಾಜದ ಸದಸ್ಯರ ಹುದ್ದೆಗೆ 3 ವರ್ಷಗಳ ಅವಧಿಗೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸೋಮವಾರ ಸಂಜೆ 6ಕ್ಕೆ ಪ್ರಕಟಣೆ ಮೂಲಕ ಎಸ್ಪಿ ಅವರು ತಿಳಿಸಿದ್ದಾರೆ. ಆದ್ದರಿಂದ ನಾಗರಿಕ ಸಮಾಜದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ನಾಗರೀಕ ಸಮಾಜದ ಸದಸ್ಯರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿ ಯೊಂದಿಗೆ ಪೊಲೀಸ್ ಅಧೀಕ್ಷಕರ ಕಚೇರಿಗೆ, 15 ದಿನದೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ.