ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮಂಥನ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯಿಂದ ಪ್ರಗತಿ ಪರಿಶೀಲನಾ ಸಭೆ ಇಂದು ನಡೆಯಿತು. ಬೆಳಗ್ಗೆ ಆರಂಭವಾದ ಸಭೆಯ ನೇತೃತ್ವವನ್ನು ಗಂಗಾವತಿ ತಾಲ್ಲೂಕಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಡಾ.ವೆಂಕಟೇಶ ಬಾಬು ವಹಿಸಿದ್ದರು. ಸಭೆಯಲ್ಲಿ ಇದ್ದ ಹಲವು ಅಧಿಕಾರಿಗಳನ್ನು ಉದ್ದೇಶಿಸಿ ಡಾ. ವೆಂಕಟೇಶ ಬಾಬು ಮಾತನಾಡಿ ಗೃಹ ಲಕ್ಷ್ಮಿ ಯೋಜನೆಯಲ್ಲಿ ಅಂಗವಿಕಲರು ಮತ್ತು ಹಿರಿಯ ನಾಗರಿಕರು ಪಡಿತರ ಚೀಟಿ ಹೊಂದಿದೆ ಯಾವೊಬ್ಬ ಮಹಿಳೆ ಹೊರಗೆ ಉಳಿಯಬಾರದು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಶಕ್ತಿ ಯೋಜನೆ ಗೃಹ ಲಕ್ಷ್ಮಿ ಯೋಜನೆ ಅನ್ನಭಾಗ್ಯ ಯೋಜನೆಯ ಬಗ್ಗೆ ತೀವ್ರ ಚರ್ಚೆ ನಡೆಯಿತು