ಭಾರಿ ಮಳೆಯಿಂದಾಗಿ ಹೆಬ್ರಿ- ಕುಚೂರು ಸಂಪರ್ಕಿಸುವ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಬದಲಿ ರಸ್ತೆಯ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾಟಿ ಭೇಟಿ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸ್ಥಳೀಯರಿಗು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು, ಹಗಲು ಹೊತ್ತು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ರಾತ್ರಿ ವೇಳೆ ವಾಹನ ಸಂಚಾರ ನಿಲ್ಲಿಸಿ ಬದಲಿ ಮಾರ್ಗದಲ್ಲಿ ಚಲಿಸುವಂತೆ ಸೂಚನೆಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಯವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.