ರಾಯಚೂರು ಜಿಲ್ಲೆಯ ಮಸ್ಕಿಪಟ್ಟಣದಲ್ಲಿ ಬೀದಿಬದಿಯ ವ್ಯಾಪಾರಿಗಳ ಅಕ್ರಮ ಶರ್ಟ್ ಗಳನ್ನು ಕಳೆದ ಎರಡು ದಿನಗಳ ಹಿಂದೆ ಇದರಿಂದಾಗಿ ಬೀದಿಬದಿ ವ್ಯಾಪಾರಿಗಳು ತುಂಬಾ ತೊಂದರೆಗೆ ಒಳಗಾಗಿದ್ದರು. ಸೋಮವಾರ ಮಧ್ಯಾಹ್ನ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಈ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಬೀದಿ ಬದಿಯ ವ್ಯಾಪಾರಿಗಳು ತಮಗೆ ಆಗುತ್ತಿರುವ ತೊಂದರೆಯ ಕುರಿತು ತಿಳಿಸಿದ್ದಾರೆ, ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಪುರಸಭೆಯ ಮುಖ್ಯ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮಾತನಾಡಿ ಬೀದಿಬದಿ ಸಣ್ಣಪುಟ್ಟ ವ್ಯಾಪಾರ ಮಾಡುವವರಿಗೆ ಅನುಕೂಲ ಮಾಡಿಕೊಡುವಂತೆ ಹಾಗೂ ಹಳೆ ಬಸ್ ನಿಲ್ದಾಣದಲ್ಲಿ ಬಸ್ಸುಗಳ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಇದ್ದರು.