ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಧ್ಯಾಹ್ನ 3.00 ಗಂಟೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನೂತನ ನಾಮಫಲಕ ಅನಾವರಣಗೊಳಿಸಿದರು. ಇದಕ್ಕೂ ಮೊದಲು ಕೇಂದ್ರ ಕಛೇರಿಗೆ ಆಗಮಿಸಿದ ಡೊ ಕೆ ಶಿವಕುಮಾರ್, ನಾಡಪ್ರಭು ಕೆಂಪೇಗೌಡ ಮತ್ತು ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮಿದೇವಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಪುಷ್ಪಾರ್ಪಣೆ ಅರ್ಪಿಸಿದರು. ತದನಂತರ ಗ್ರೇಟರ್ ಬೆಂಗಳೂರು ನಾಮಫಲಕ ಉದ್ಘಾಟಿಸಿ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಜಿಬಿಎ ನಾಮಫಲಕವನ್ನು ಜಿಬಿಎ ಕೇಂದ್ರ ಕಚೇರಿಯಲ್ಲಿ ಅನಾವರಣಗೊಳಿಸಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರ