ಕಂಪ್ಲಿ : ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹಾಗೂ ಹೊರಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮೇಲೆ ಪಾದಚಾರಿ ಹಾಗೂ ಲಘುವಾಹನಗಳ ಸಂಚಾರಕ್ಕೆ ಆಗಸ್ಟ್ 22, ಶುಕ್ರವಾರ ಮಧ್ಯಾಹ್ನ 12:30ಕ್ಕೆ ಲೋಕೋಪಯೋಗಿ ಇಲಾಖೆ ಅನುವು ಮಾಡಿಕೊಟ್ಟಿದೆ.ಸದ್ಯ ಡ್ಯಾಂ ನಿಂದ 48 ಸಾವಿರ ಕ್ಯುಸೆಕ್ಸ್ ನೀರನ್ನ ನದಿಗೆ ಬಿಡುಗಡೆ ಮಾಡಿದ್ದು, ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯ ಕೆಳಗಡೆ ನೀರು ಇಳಿಕೆಯಾಗಿದೆ.