ಹೊಸದುರ್ಗ ತಾಲ್ಲೂಕಿನ ಅಜ್ಜಿ ಕಂಸಾಗರ ಗ್ರಾನದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬೀಗ ಮುರಿದು ನಗದು ಹಣ ಹಾಗೂ ಚಿನ್ನಾಭರಣ ದೋಚಿ ಕಳ್ಳರು ಎಸ್ಕೇಪ್ ಆಗಿರುವ ಘಟನೆ ಶನಿವಾರ ಬೆಳಿಗ್ಗೆ 8 ಗಂಟೆಗೆ ಬೆಳಕಿಗೆ ಬಂದಿದೆ. ಗ್ರಾಮದ ಶಿವಪ್ಪ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆಯ ಬೀರುವಿನಲ್ಲಿಟ್ಟಿದ್ದ 3.20 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ಮೌಲ್ಯದ ನಗದು ಹಣ ಕಳವು ಮಾಡಲಾಗಿದೆ. ಶಿವಪ್ಪ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದ ವೇಳೆ ಹೊಂಚು ಹಾಕಿ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ