ರಾಜ್ಯ ಸಚಿವ ಸಂಪುಟದಿಂದ ವಜಾಗೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಮತ್ತೇ ಸಂಪುಟಕ್ಕೆ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಾಯಕ ಸಂಘವು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು- ಚಾಮರಾಜನಗರ ಜಿಲ್ಲಾ ನಾಯಕ ಸಂಘದ ಅಧ್ಯಕ್ಷ ರಾಮಚಂದ್ರು ನೇತೃತ್ವದಲ್ಲಿ ನೂರಾರು ಮಂದಿ ನಗರದ ಚಾಮರಾಜೇಶ್ವರ ದೇಗುಲದಿಂದ ಜಿಲ್ಲಾಡಳಿತ ಭವನದ ತನಕ ಮೆರವಣಿಗೆ ನಡೆಸಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು. ರಾಜಣ್ಣರನ್ನೇ ಮತ್ತೇ ಸಂಪುಟಕ್ಕೆ ತೆಗೆದುಕೊಳ್ಳಬೇಕೆಂದು ರಾಜಣ್ಣ ಫೋಟೋ ಹಿಡಿದು ಜೈಕಾರ ಕೂಗಿದರು. ವಾಲ್ಮೀಕಿ ಸಮುದಾಯದಕ್ಕೆ ಅನ್ಯಾಯ ಬೇಡ ಕೂಡಲೇ ರಾಜಣ್ಣರನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.