ಸಾಲಬಾಧೆ ತಾಳಲಾರದೇ ರೈತರೊಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ನಡೆದಿದೆ. ಹುಚ್ಚೆಂಗೆಪ್ಪ ಕೆಂಚಪ್ಪ ಹರಿಜನ (45) ಮೃತ ರೈತರಾಗಿದ್ದಾರೆ. ಅತಿವೃಷ್ಟಿ ಅನಾವೃಷ್ಟಿ ಮಳೆಯಿಂದ ಸರಿಯಾಗಿ ಬೆಳೆ ಬಾರದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.