ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಗಳ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಗಳು, ಸುಳ್ಳು ಸುದ್ದಿ, ಕೋಮು ಪ್ರಚೋದಿತ ಸಂದೇಶಗಳನ್ನು ಹಾಕಿದ್ರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಚಿಕ್ಕಮಗಳೂರು ಎಸ್ಪಿ . ವಿಕ್ರಂ ಅಮಟೆ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಸಾಮಾಜಿಕ ಜಾಲತಾಣಗಳ ಬಳಕೆದಾರರ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದರು. ಅಲ್ಲದೇ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯ ಒಳಗೆ ಮುಗಿಸಲು ಸೂಚನೆ ನೀಡಲಾಗಿದೆ. ಗಣೇಶ ಮೂರ್ತಿಗಳ ವಿ