ನಾರಾಯಣಪುರ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಚಾಲನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು ಚಾಲನೆ ನೀಡಿದರು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ ಕ್ರೀಡೆಯಿಂದ ಮನುಷ್ಯ ಆರೋಗ್ಯವಾಗಿರುತ್ತಾನೆ ಕ್ರೀಡಾಪಟುಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಶಿಕ್ಷಕರು ಜನಪ್ರತಿನಿಧಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.