ಶಿಸ್ತಿನ ಕರ್ತವ್ಯಕ್ಕೆ ದಕ್ಷಿಣ ಸಂಚಾರ ಠಾಣೆಯ ಪೊಲೀಸ್ ಸಿಬ್ಬಂದಿ ನಾಗರಾಜ ಕೆ ಅವರಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರಿಗೆ ಪ್ರಶಂಸನಾ ಪತ್ರ ನೀಡಿ ಶ್ಲಾಘಿಸಿದ್ದಾರೆ. ದಿನಾಂಕ 12.08.2025ರಂದು ಆರ್.ಟಿ.ಓ ಕಚೇರಿಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ದಾವಣಗೆರೆ ದಕ್ಷಿಣ ಸಂಚಾರ ಠಾಣೆಯ ಪೊಲೀಸ್ ಸಿಬ್ಬಂದಿ ನಾಗರಾಜ್ ಕೆ ಅತೀ ಮಳೆಯನ್ನು ಲೆಕ್ಕಿಸದೇ ಕರ್ತವ್ಯ ಪ್ರಜ್ಞೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹಾಗೂ ಸಂಚರಿ ನಿಯಮಗಳನ್ನು ಉಲ್ಲಂಘಿಸಿದAತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಶಿಸ್ತಿನಿಂದ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಗಮನಿಸಿ ಜಿಲ್ಲಾಧಿಕಾರಿಗಳು ಪ್ರಶಂಸನಾ ಪತ್ರ ನೀಡಿದ್ದಾರೆ ಎಂದು ಜಿಲ್ಲಾಡಳಿತ ದಾವಣಗೆರೆ ನಗರದಲ್ಲಿ ಗುರುವಾರ ಸಂಜೆ 6 ಗಂಟೆಗೆ ತಿಳಿಸಿದೆ.