ಚಿಕಿತ್ಸೆ ಬಳಿಕ ಗುಣಮುಖರಾದ ಮಾನಸಿಕ ಅಸ್ಪಸ್ಥರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬೇಕು ಎಂದು ಆರ್ಬಿಟ್ ಸಂಸ್ಥೆಯ ನಿರ್ದೇಶಕ ಫಾದರ್ ವಿಕ್ಟರ್ ವಾಸ್ ತಿಳಿಸಿದರು. ಮದರ್ ತೆರೇಸಾ ಸ್ಮನೋತ್ಸವ ಅಂಗವಾಗಿ ಶನಿವಾರ ಸಂಜೆ 4ಕ್ಕೆ ನಗರದ ಆರ್ಬಿಟ್ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಆಯ್ಕೆಗೊಂಡ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಹಾಗೂ ಕುರಿ ವಿತರಿಸಿ ಮಾತನಾಡಿದರು.