ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು ಸೆಪ್ಟೆಂಬರ್ 22 ರಂದು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು ಎಂದರು.