ಬುಧವಾರ ಸಂಜೆ 4ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಬೀಡಾಡಿ ದನಗಳಿಂದ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಭಟ್ಕಳದಿಂದ ಮಾಜಾಳಿ ವರೆಗಿನ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಕಂಡು ಬರುವ ಬೀಡಾಡಿ ದನಗಳಿಂದ ಹೆಚ್ಚಿನ ಸಂಖ್ಯೆಯ ವಾಹನ ಅಪಘಾತಗಳು ಸಂಭವಿಸುತ್ತಿದ್ದು ಈ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಒ ಇದ್ದರು